Home » Uncategorized » ಈ 3 ದಾಖಲೆ ಕೊಟ್ಟು ಗೃಹಲಕ್ಷ್ಮಿ ಪೆಂಡಿಂಗ್ ಹಣ ಪಡೆಯಿರಿ, 7ನೇ ಕಂತಿನ ಹಣ ಬಿಡುಗಡೆ, ಚೆಕ್ ಮಾಡಿಕೊಳ್ಳಿ

ಈ 3 ದಾಖಲೆ ಕೊಟ್ಟು ಗೃಹಲಕ್ಷ್ಮಿ ಪೆಂಡಿಂಗ್ ಹಣ ಪಡೆಯಿರಿ, 7ನೇ ಕಂತಿನ ಹಣ ಬಿಡುಗಡೆ, ಚೆಕ್ ಮಾಡಿಕೊಳ್ಳಿ

WhatsApp Group Join Now
Telegram Group Join Now

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದ ‘ಗೃಹಲಕ್ಷ್ಮಿ’ ಯೋಜನೆಗೆ, ಜುಲೈ 20ರಂದು ರಾಜ್ಯದಾದ್ಯಂತ ಚಾಲನೆ ನೀಡಲಾಗಿತ್ತು. ಪ್ರತಿ ತಿಂಗಳು ಇಷ್ಟೊತ್ತಿಗಾಗಲೇ ಪಾವತಿಯಾಗುತ್ತಿದ್ದ ಮೊತ್ತವು ಈ ಸಲ ವಿಳಂಬವಾಗಿದೆ. ರಾಜ್ಯದಲ್ಲಿ ಒಟ್ಟು 1.2 ಕೋಟಿ ಜನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದರಿಂದ ಒಂದೇ ಸಾರಿ ಎಲ್ಲರ ಖಾತೆಗೆ ಬರಲು ಸಾಧ್ಯ ಇರುವುದಿಲ್ಲ. ಅದಕ್ಕೆ ಆರ್‌ಬಿಐನ ಕೆಲವು ನಿಯಮಗಳು ತಡೆಯೊಡ್ದುತ್ತವೆ. ಹಾಗಾಗಿ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿದ್ದು ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳ ಮಹಿಳೆಯರ ಖಾತೆಗೆ ಬರುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ತಕ್ಷಣ ಈ ಕೆಲಸ ಮಾಡಿದ್ರೆ ಒಟ್ಟಿಗೆ ಬರಲಿದೆ ‘ಗೃಹಲಕ್ಷ್ಮಿ’ ಹಣ

ಯೋಜನೆಯಡಿ ನೊಂದಾಯಿಸಿಕೊಂಡರೂ ಹಣ ಬಾರದ ಫಲಾನುಭವಿಗಳು ಕೂಡಲೇ ಇಕೆವೈಸಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇದ್ದರೆ, ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಇಂದೇ ಮಾಡಿಸಿಕೊಳ್ಳಿ. ಅಥವಾ ಪ್ರಸ್ತುತ ಚಾಲ್ತಿಯಲ್ಲಿರುವ ಖಾತೆಯಲ್ಲಿ ಏನಾದರೂ ಸಮಸ್ಯೆ ಇದ್ರೆ ಹೊಸ ಖಾತೆ ತೆರೆದು ಗೃಹಲಕ್ಷ್ಮಿ ಅರ್ಜಿಯಲ್ಲಿ ಅಪ್ ಡೇಟ್ ಮಾಡಿಸಿಕೊಳ್ಳಿ.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಕೂಡ ಮಹಿಳೆಯರ ಸಮಸ್ಯೆಗೆ ಕೈ ಜೋಡಿಸಲಿದ್ದು, ಅವರ ಜೊತೆ ನಿಂತು ಗೃಹಲಕ್ಷ್ಮಿ ಸಮಸ್ಯೆ ನಿವಾರಿಸಿ ಹಣ ಜಮಾ ಮಾಡಿಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡು ಹಣ ಬಾರದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಪರಿಹರಿಸಿಕೊಳ್ಳಬೇಕು.ನೀವು ಕೊಟ್ಟಿರುವ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಕೆವೈಸಿ ಮಾಡಿಸಬೇಕು. ಅಂದರೆ, ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಅನ್ನು ಮಾಡಿಸಿಕೊಳ್ಳಿ ಆಗ ಹಣ ಜಮೆ ಆಗಲಿದೆ. ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾರ್ ಸೀಡಿಂಗ್ ಮಾಡಿಸಬೇಕಾಗಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಬಗ್ಗೆ ಮೊಬೈಲ್ಗೆ ಎಸ್‌ಎಂಎಸ್ ಬರುತ್ತದೆ. ಹಲವು ಬಾರಿ ಎಸ್‌ಎಂಎಸ್ ಬರುವುದಿಲ್ಲ. ಇಂತಹ ಸಮಯದಲ್ಲಿ ನೀವು ಬ್ಯಾಂಕ್ ನಲ್ಲಿ ಹೋಗಿ ಪಾಸ್ ಬುಕ್ ಚೆಕ್ ಮಾಡಿಸಬೇಕು.

ಹೆಚ್ಚು ಖಾತೆ ಹೊಂದಿ, ಹಣ ಚಲಾವಣೆ ಮಾಡಿಲ್ಲವೇ?

ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಅನ್ನು ಲಿಂಕ್‌ ಮಾಡಿಸಿರಬೇಕು. ಕೆಲವರು ಮೂರ್ನಾಲ್ಕು ವರ್ಷಗಳ ಹಿಂದೆ ಗ್ರಾಮೀಣ ಬ್ಯಾಂಕ್‌ ಅಥವಾ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಖಾತೆಯನ್ನು ತೆರೆದಿರುತ್ತಾರೆ. ನಂತರ ಅದನ್ನು ಮರೆತೇಬಿಟ್ಟಿರುತ್ತಾರೆ. ಬಳಿಕ ಮತ್ತೊಂದು ಬ್ಯಾಂಕ್‌ನಲ್ಲಿ ಖಾತೆ ತೆರೆದಿರುತ್ತಾರೆ. ಇದಕ್ಕೆ ಆಧಾರ್‌ ಲಿಂಕ್‌ ಮಾಡಿಸಿರುತ್ತಾರೆ. ನಂತರ ಮತ್ತೊಂದು ಬ್ಯಾಂಕ್‌ನಲ್ಲಿ ತೆರೆದಿರುತ್ತಾರೆ.

ಆದರೆ ಗೃಹಲಕ್ಷ್ಮಿ ಯೋಜನೆಯ ನೋಂದಣಿ ವೇಳೆ ಯಾವ ಬ್ಯಾಂಕ್‌ನ ಖಾತೆಯನ್ನು ತೆಗೆದುಕೊಂಡಿದೆ ಎಂಬುದು ಗ್ರಾಹಕರಿಗೆ ಗೊತ್ತಾಗುವುದಿಲ್ಲ. ಯಾಕೆಂದರೆ, ಗೃಹಲಕ್ಷ್ಮಿ ನೋಂದಣಿಗೆ ಕೇವಲ ಆಧಾರ್‌ ಸಂಖ್ಯೆ ಮತ್ತು ಪಡಿತರ ಚೀಟಿಯ ಸಂಖ್ಯೆಗಳೊಂದಿಗೆ ನೋಂದಾಯಿಸಲಾಗಿರುತ್ತದೆ.

7ನೇ ಕಂತಿನ ಹಣ ಬಿಡುಗಡೆ!

ಈಗಾಗಲೇ 12,000 ಪಡೆದಿರುವ ಎಲ್ಲಾ ಮಹಿಳೆಯರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ, 7ನೇ ಕಂತಿನ ಹಣ ಮಾರ್ಚ್ 15 ರಂದು ಬಿಡುಗಡೆಯಾಗಿದ್ದು. ಹಂತ ಹಂತ ವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಬರುತ್ತದೆ. ಆರು ಕಂತಿನ ಹಣ ಪಡೆದ ಮಹಿಳೆಯರು 7ನೇ ಕಂತಿನ ಹಣ ಬಂದಿಲ್ಲ ಎಂದು ಚಿಂತೆ ಮಾಡುವ ಅಗತ್ಯ ಇಲ್ಲ, ದೊಡ್ಡ ಮೊತ್ತದ ಹಣ ಆಗಿರುವುದರಿಂದ ಮಾರ್ಚ್ 31ರ ಒಳಗೆ ಎಲ್ಲಾ ಖಾತೆಗೆ ಬಂದು ತಲುಪುತ್ತದೆ.

WhatsApp Group Join Now
Telegram Group Join Now

About

Leave a Reply

Your email address will not be published. Required fields are marked *