Home » Rain News » Karnataka Rain : ಮಳೆ, ಮಳೆ.. ಮಾರ್ಚ್ 31 ರಿಂದ ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ 2 ದಿನ ಮಳೆಯ ಮುನ್ಸೂಚನೆ

Karnataka Rain : ಮಳೆ, ಮಳೆ.. ಮಾರ್ಚ್ 31 ರಿಂದ ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ 2 ದಿನ ಮಳೆಯ ಮುನ್ಸೂಚನೆ

WhatsApp Group Join Now
Telegram Group Join Now

ರಾಜ್ಯದಲ್ಲಿ ಮೈಸೂರು ಸೇರಿದಂತೆ ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ,ದಕ್ಷಿಣ ಕನ್ನಡ ,ಉತ್ತರ ಕನ್ನಡ, ಉಡುಪಿ ಮತ್ತು ಹಲವು ಜಿಲ್ಲೆಗಳಲ್ಲಿ ಮಾರ್ಚ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾವೇರಿ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,  ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬಾಳೆಹೊನ್ನೂರು, ಲೋಂಡಾದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 19.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ

ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಲಘು ಮಳೆ ಸುರಿಯುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now

About

Leave a Reply

Your email address will not be published. Required fields are marked *