Home » News » Voter list: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕಾಲಾವಕಾಶ.

Voter list: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕಾಲಾವಕಾಶ.

WhatsApp Group Join Now
Telegram Group Join Now

ಲೋಕಸಭೆ ಚುನಾವಣೆಯ ಭರಾಟೆಯ ನಡುವೆಯ ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಅದರಂತೆ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3 ರಂದು ನಡೆಯಲಿದ್ದು ಅರ್ಹ ಪದವಿಧರ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮೇ 6ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮತದಾರರ ನೊಂದಣಿ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದ್ದು ಈಗಾಗಲೇ 30. 12. 2023 ರಂದು ಅಂತಿಮ ಮತದಾರರ ಪಟ್ಟಿಯನ್ನು ಹೊರಡಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಬರದೇ ಇರುವ ಅರ್ಹ ಮತದಾರರು ಹಾಗೂ ಹೊಸದಾಗಿ ಸೇರ್ಪಡೆಯಾಗುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಮಾಡಿಕೊಳ್ಳಲು ಇದೇ ಮೇ 6ರ 2024 ಸಂಜೆ 5:30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಮತದಾರರ ನೊಂದಣಿಗಾಗಿ ಅರ್ಜಿಯನ್ನು ಪಡೆಯುವ ಪ್ರಕ್ರಿಯೆ ನಿರಂತರ ಇರುತ್ತದೆ ಕಾರಣ ಹೊಸದಾಗಿ ಸೇರ್ಪಡೆಯಾಗುವ ಮತದಾರರು ನಿಗದಿತ ಕಾಲಮಿತಿಯೊಳಗೆ ತಮ್ಮ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಂಡು ಮತದಾನದ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವ ವ್ಯವಸ್ಥೆ ರಚನೆಗೆ ಪಾತ್ರ ವಹಿಸಬೇಕೆಂದು ತಿಳಿಸಿದರು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *