Home » Uncategorized » ಬಿಜೆಪಿಯ ಮಾಜಿ ಶಾಸಕ ನೆಹರು ಓಲೇಕಾರ ಕಾಂಗ್ರೆಸ್ ಸೇರ್ಪಡೆ

ಬಿಜೆಪಿಯ ಮಾಜಿ ಶಾಸಕ ನೆಹರು ಓಲೇಕಾರ ಕಾಂಗ್ರೆಸ್ ಸೇರ್ಪಡೆ

WhatsApp Group Join Now
Telegram Group Join Now

ಹಲವು ದಿನಗಳಿಂದ ಮಾಜಿ ಶಾಸಕ ನೆಹರು ಓಲೇಕಾರ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಾರೆನ್ನುವ ಉಹಾಪೊಹಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಯಾದಗಿರಿಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೆಹರು ಓಲೇಕಾರ ಅವರಿಗೆ ಕಾಂಗ್ರೆಸ್ ಶಾಲನ್ನು ಹೊದಿಸಿ ಪಕ್ಷದ ಬಾವುಟ ವನ್ನು ನೀಡಿ ಪಕ್ಷಕ್ಕೆ ಸೇರ್ಪಡೆಮಾಡಿಕೊಂಡರು.

ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷಸೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸಹಮತ ವ್ಯಕ್ತಪಡಿಸಿದ್ದರೆಂದು ತಿಳಿದು ಬಂದಿದೆ. ನೆಹರು ಓಲೇಕಾರ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವುದು ಖಚಿತವಾದಾಗ ಅಂತಿಮವಾಗಿ ಯಾದಗಿರಿಯಲ್ಲಿ ನೆಡೆಯುವ ಪಕ್ಷದ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ನೆಹರೂ ಓಲೇಕಾರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಯಾದಗಿರಿಗೆ ಬರುವಂತೆ ತಿಳಿಸಿದ ಹಿನ್ನೆಯಲ್ಲಿ ಓಲೇಕಾರ ಅವರು ಯಾದಗಿರಿಗೆ ತೆರಳಿ ಅಲ್ಲಿ ನಡೆದ ಸಮಾರಂಭದಲ್ಲಿ ಕಮಲ ಬಿಟ್ಟು, ಕೈಹಿಡಿದರು.

ಪಕ್ಷ ಸೇರ್ಪಡೆಗೂ ಮುನ್ನ ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿಅವರ ಜೊತೆಗೆ ಮಾಜಿ ಶಾಸಕರಾದ ನೆಹರು ಓಲೇಕಾರ ರವರು ಸುದೀರ್ಘ ಮಾತುಕತೆ ನಡೆಸಿದ್ದರೆನ್ನಲಾಗಿದೆ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಸಮಯದಲ್ಲಿ ಬಿಜೆಪಿ ತೊರೆದು ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರಿಂದ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಉಭಯ ಪಕ್ಷಗಳಲ್ಲಿ ಭಾರಿ ಚರ್ಚೆಯನ್ನು ಗ್ರಾಸವಾಗಿದೆ ಈ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ವರವಾಗಬಹುದೆ ಕಾದುನೋಡಬೇಕಾಗಿದೆ

WhatsApp Group Join Now
Telegram Group Join Now

Leave a Reply

Your email address will not be published. Required fields are marked *