Home » Govt Schemes » Ration Card Update: ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಈ ದಾಖಲೆಗಳು ಕಡ್ಡಾಯ

Ration Card Update: ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಈ ದಾಖಲೆಗಳು ಕಡ್ಡಾಯ

WhatsApp Group Join Now
Telegram Group Join Now

ಹೊಸ ರೇಷನ್ ಕಾರ್ಡ್ ಪಡೆಯುವ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.

ಹಲವಾರು ದಿನಗಳಿಂದ ಸ್ಥಗಿತಗೊಂಡಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕಾರ್ಯ ಇದೆ ಜೂನ್ ತಿಂಗಳ ಮೊದಲ ವಾರದಿಂದ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ನಿರ್ಬಂಧ ತೆರವುಗೊಂಡ ತಕ್ಷಣವೇ ಹೊಸ ರೇಷನ್ಕಾರ್ಡ್ ಗಳಿಗೆ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಾರ್ಯಕ್ಕೆ ಚಾಲನೆ ಸಿಗುವ ಸಾಧ್ಯತೆ ಇದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ರೀತಿಯ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ.

ಆರೋಗ್ಯ. ಶಿಕ್ಷಣ. ಆಧಾರ್ ಕಾರ್ಡ್ ಮಾಡಿಸಲು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಹಾಗೂ ಇನ್ನಿತರ ಎಲ್ಲಾ ಕೆಲಸ ಕಾರ್ಯಗಳಿಗೂ ರೇಷನ್ ಕಾರ್ಡ್ ಅವಶ್ಯಕ ದಾಖಲೆವಯಾಗಿದೆ, ಈ ಕಾರಣಕ್ಕಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಲವು ಜನರು ಕಾತುರರಾಗಿದ್ದಾರೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಅವಕಾಶ ಕಲ್ಪಿಸಿತ್ತಾದರೂ ಕಡಿಮೆ ಅವಧಿಯನ್ನು ನಿಗದಿಪಡಿಸಲಾಗಿದ್ದರಿಂದ ಹಾಗೂ ಆನ್ಲೈನ್  ಸರ್ವರ್ ಸಮಸ್ಯೆ ಎದುರಾಗಿತ್ತು

ಕಳೆದ ಏಪ್ರಿಲ್ 1 ರಿಂದ ಹೊಸ ಪಡಿರ ಚೀಟಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಆಹಾರ ಸಚಿವ ಶ್ರೀ ಕೆ ಹೆಚ್ ಮುನಿಯಪ್ಪ ತಿಳಿಸಿದ್ದರು,ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಕಾರಣ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲಾತಿಗಳು.

ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಹೊಸದಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು

ನಿವಾಸಿ ಪತ್ರ ಅಥವಾ ಆಧಾರ್ ಕಾರ್ಡ್,

ವೋಟರ್ ಐಡಿ

ಕುಟುಂಬದ ಆದಾಯ ಪ್ರಮಾಣ ಪತ್ರ

ಮೊಬೈಲ್ ನಂಬರ್

ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ

ಸ್ವಯಂ ಘೋಷಣಾ ಪತ್ರ

ಅರ್ಜಿ ಎಲ್ಲಿ ಸಲ್ಲಿಸಿಬೇಕು.

ಮೇಲೆ ತಿಳಿಸಿರುವಂತೆ ಎಲ್ಲಾ ದಾಖಲಾತಿಗಳೊಂದಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ನಿಮ್ಮ ಹತ್ತಿರದ CSC ಸೆಂಟರ್ ಅಥವಾ ಗ್ರಾಮ ಒನ್ ಕೇಂದ್ರ. ಕರ್ನಾಟಕ ಒನ್ ಕೇಂದ್ರ. ಬೆಂಗಳೂರು ಒನ್ ಕೇಂದ್ರ ಸೈಬರ್ ಸೆಂಟರ್ ಗಳಲ್ಲಿ ನಿಗದಿತ ಅರ್ಜಿ ಶುಲ್ಕ ನೀಡಿ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ನಿರ್ಬಂಧ ತೆರವುಗೊಂಡ ತಕ್ಷಣವೇ ಅಂದರೆ ಜೂನ್ ಮೊದಲ ವಾರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಸಾಧ್ಯತೆ ಹೆಚ್ಚಾಗಿದೆ.
ಹಾಗಾಗಿ ಅಗತ್ಯ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಂಡು ಆಹಾರ ಇಲಾಖೆಯು ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟ ತಕ್ಷಣವೇ ಅರ್ಜಿ ಸಲ್ಲಿಸಲು ಸಿದ್ಧರಾಗಿರಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *