Home » Uncategorized » ಮೇ 7ರಂದು ಮತದಾನಕ್ಕೆ ಬೆಂಗಳೂರಿನಿಂದ ವಿಶೇಷ ಸಾರಿಗೆ ಬಸ್ ಬಿಡುಗಡೆ ಮಾಡಿದ NWKRT

ಮೇ 7ರಂದು ಮತದಾನಕ್ಕೆ ಬೆಂಗಳೂರಿನಿಂದ ವಿಶೇಷ ಸಾರಿಗೆ ಬಸ್ ಬಿಡುಗಡೆ ಮಾಡಿದ NWKRT

WhatsApp Group Join Now
Telegram Group Join Now

ಸಾರ್ವರ್ತಿಕ ಲೋಕಸಭಾ ಚುನಾವಣೆ ಅಂಗವಾಗಿ ಮೇ 7 ರಂದು ಮತದಾನ ನಡೆಯಲಿರುವ ಕಾರಣ ಮತದಾನ ಮಾಡಲಿಕ್ಕಾಗಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರಿಗೆ ಸಾರಿಗೆ ಸಂಸ್ಥೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದೆಂಬ ಸಲುವಾಗಿ ಅವಶ್ಯಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ವಿಭಾಗಗಳಿಂದ ಸುಮಾರು 400 ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿರುತ್ತಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಗೆ ಒಳಪಡುವ

ಹುಬ್ಬಳ್ಳಿ, ಧಾರವಾಡ,ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ,
ಚಿಕ್ಕೋಡಿ, ಬಾಗಲಕೋಟೆ ವಿಭಾಗಗಳು ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದಿಂದ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾರಂಬಿಸಲಾಗುತ್ತಿದೆ.

ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ದಿನಾಂಕ 03-05-2024 ರಿಂದ 06-05-2024 ರ ತನಕ ರಾಜ್ಯದ ಜನತೆಗೆ ಹೆಚ್ಚುವರಿಯಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಸಾರ್ವಜನಿಕರಿ ಈ ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ

 

WhatsApp Group Join Now
Telegram Group Join Now

Leave a Reply

Your email address will not be published. Required fields are marked *