Home » Job News » VA Recruitment: ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಅರ್ಜಿ ಸಲ್ಲಿಕೆ ವಿಸ್ತರಣೆ! ಇಲ್ಲಿದೆ ಅಧಿಸೂಚನೆ

VA Recruitment: ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಅರ್ಜಿ ಸಲ್ಲಿಕೆ ವಿಸ್ತರಣೆ! ಇಲ್ಲಿದೆ ಅಧಿಸೂಚನೆ

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧ ಪಟ್ಟಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 20.2.2024 ರಂದು ಸಂಪೂರ್ಣ ವಿವರವಾದ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.

ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 3. 4. 2024ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು, ಆದರೆ ಆನ್ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ ದಿನಾಂಕ 4. 5. 2024 ರವರೆಗೆ ಅರ್ಜಿ ಸಲ್ಲಿಸಲು ಹಾಗೂ ದಿನಾಂಕ 7.5.2024 ರ ವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತೆಂದು ತಮಗೆಲ್ಲ ತಿಳಿದಿರುವ ವಿಷಯವಾಗಿತ್ತು.

ಆದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಾದ ತಾಂತ್ರಿಕ ಸಮಸ್ಯೆಯ ಕುರಿತಂತೆ  ಕೆಲವು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 15 ಮೇ 2024 ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆ ಹೊರಡಿಸಿದೆ.
ವಿಸ್ತರಣೆಯಾದ ಅವಧಿ.

ದಿನಾಂಕ ವಿಸ್ತರಣೆ ಅಧಿಸೂಚನೆ – ಡೌನ್ಲೋಡ್ ಮಾಡಿ

ಆನ್ಲೈನ್ ಮೂಲಕ ಅರ್ಜಿ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ 15. 5. 2024 ರವರೆಗೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 18. 5. 2024.

ಅರ್ಜಿ ಸಲ್ಲಿಸುವ ಅವಧಿಯನ್ನು ಈ ಮೇಲಿನಂತೆ ವಿಸ್ತರಿಸಲಾಗಿದೆ ಉದ್ಯೋಗ ಆಕಾಂಕ್ಷಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

1000 ಹುದ್ದೆಗಳು : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಉಳಿಕೆ ಮೂಲ ಹಾಗೂ ಕಲ್ಯಾಣ ಕರ್ನಾಟಕ ಬೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ವೇತನ.
21,400 ರಿಂದ 42,000 ರೂಗಳ ವೇತನ ನಿಗದಿಮಾಡಲಾಗಿದೆ.

ವಿಧ್ಯಾರ್ಹತೆ.
ದ್ವಿತೀಯ ಪಿಯುಸಿ ಹಾಗೂ ತತ್ಸಮಾನ ವಿಧ್ಯಾರ್ಹತೆ ಹೊಂದಿರುಬೇಕು

ವಯೋಮಿತಿ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು .
ಹಿಂದುಳಿದ ವರ್ಗಗಳ ಪ್ರವರ್ಗ 2ಎ. 2ಬಿ. 3ಎ. 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು .
ಪರಿಶಿಷ್ಟ ಜಾತಿ /ಪರಿಶಿಷ್ಟ /ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು

ಆಸಕ್ತ ಅಭ್ಯರ್ಥಿಗಳು   ಕೊಟ್ಟಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ಯಾವಾದಾದರೂ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಯು ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಿ ತಕ್ಕದ್ದು ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿ ಯಾವುದೇ ತಿದ್ದುಪಡಿಗೆ ಅವಕಾಶ ಇರುವುದಿಲ್ಲ ಆದಕಾರಣ ಅಭ್ಯರ್ಥಿಗಳು ಸರಿಯಾದ ನಿಖರ ಮಾಹಿತಿ ತುಂಬಿ ಅರ್ಜಿ ಸಲ್ಲಿಸಬೇಕು

ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅರ್ಜಿ ಸಲ್ಲಿಕೆ ದಿನಾಂಕ ವಿವರ: ಡೌನ್‌ಲೋಡ್
VOA ತಿದ್ದುಪಡಿ: ಡೌನ್’ಲೋಡ್

WhatsApp Group Join Now
Telegram Group Join Now

Leave a Reply

Your email address will not be published. Required fields are marked *