Home » Political News » ವಿನಯಕುಮಾರ ಸೋಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ.

ವಿನಯಕುಮಾರ ಸೋಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ.

WhatsApp Group Join Now
Telegram Group Join Now

ದಾವಣಗೆರೆ:    ದಾವಣಗೆರೆ ಲೋಕಸಭಾ ಕ್ಷೇತ್ರ ದಲ್ಲಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್            ಪಕ್ಷದ ಅಧಿಕೃತ ಅಭ್ಯರ್ಥಿ .ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿನಯ್ ಕುಮಾರ್ ಅವರಿಗೆ ನನ್ನ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ನೆಡೆದ ಪ್ರಜಾಧ್ವನಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ದಾವಣಗೆರೆ  ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು,  ಆದರೆ ವಿನಯಕುಮಾರ ಪಕ್ಷಕ್ಕೆ ಬಂದು ಇನ್ನೂ ಆರೇಳು ತಿಂಗಳು ಕಳೆದಿವೆ .ಆದರೆ ಶಾಮನೂರು ಶಿವಶಂಕರಪ್ಪ ಮತ್ತು ಅವರ ಮಗ ಮಲ್ಲಿಕಾರ್ಜುನ ಅವರ ಕುಟುಂಬ ಹತ್ತಾರು ವರ್ಷಗಳಿಂದ ಪಕ್ಷಕ್ಕಾಗಿ ಸೇವೆ ಮಾಡಿದ್ದಾರೆ. ಹಾಗಾಗಿ ಪಕ್ಷ  ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿದೆ.

ವಿನಯಕುಮಾರ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಬೇಡಿ ಎಂದಾಗ ಆಯಿತು ಪ್ರಭಾ ಮಲ್ಲಿಕಾರ್ಜುನ ಅವರು ಉತ್ತಮ ಅಭ್ಯರ್ಥಿಯಾಗಿದ್ದಾರೆ ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದಂತೆ ಎಂದು ನನ್ನ ಮತ್ತು ಕಾಗಿನೆಲೆ ಕನಕ ಗುರು ಪೀಠದ ಶ್ರೀ ನಿರಂಜನಾನಂದ ಪುರಿ ಶ್ರೀಗಳ ಎದುರು ಒಪ್ಪಿಕೊಂಡು ಹೋಗಿ ನಂತರ ದಿನಗಳಲ್ಲಿ ಉಲ್ಟಾ ಹೊಡೆದು ನಮ್ಮಿಬ್ಬರಿಗೂ ಮಾತು ತಪ್ಪಿ ನಡೆದಿದ್ದಾರೆ.

ವಿನಯ್ ಕುಮಾರ್ ಚುನಾವಣೆಗೆ ಸ್ಪರ್ಧಿಸಿರುವುದರಲ್ಲಿ ಬಿಜೆಪಿಯ ಕುಮ್ಮಕ್ಕಿದೆ. ಏಕೆಂದರೆ ಇವರ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತದೆ.ನೀವೆಲ್ಲ ಸೇರಿ ವಿನಯಕುಮಾರ್ ನನ್ನು ಸೋಲಿಸಬೇಕು. ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದರೆ ಮುಖ್ಯಮಂತ್ರಿಯಾಗಿ ನನಗೆ ಮತ್ತಷ್ಟು ಶಕ್ತಿ ಬರುತ್ತದೆ.

ಹಾಗಾಗಿ ತಾವುಗಳೆಲ್ಲ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಬೇಕು ನಮ್ಮ ಪಕ್ಷದ ವಿರುದ್ಧ ಬಂಡಾಯವೆದ್ದಿರುವ  ವಿನಯ್ ಕುಮಾರ್ ಅವರನ್ನು ಸೋಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು

WhatsApp Group Join Now
Telegram Group Join Now

Leave a Reply

Your email address will not be published. Required fields are marked *